ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ಗಳು ಮತ್ತು 5 ಕೆಜಿ ಎಫ್ಟಿಎಲ್(ಫ್ರೀ ಟ್ರೇಡ್ ಎಲ್ಪಿಜಿ) ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಿವೆ.
19 ಕೆ.ಜಿ ವಾಣಿಜ್ಯ ಸಿಲಿಂಡರ್ಗೆ 30.50 ರೂಪಾಯಿ ಇಳಿಕೆಯಾಗಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏಪ್ರಿಲ್ 1 ರಿಂದ ದೆಹಲಿಯಲ್ಲಿ ಬೆಲೆ 1764.50 ಕ್ಕೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 5 ಕೆಜಿ ಎಫ್ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.
ಮಾರ್ಚ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ(LPG) ಗ್ಯಾಸ್ ಸಿಲಿಂಡರ್ ಗಳ ಬೆಲೆಗಳಲ್ಲಿ ಹೆಚ್ಚಳ ಘೋಷಿಸಿದ್ದವು. ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಏರಿಳಿತದ ಸಮಯದಲ್ಲಿ ಬೆಲೆಗಳಲ್ಲಿನ ಈ ಪರಿಷ್ಕರಣೆ ಮಾಡಲಾಗಿತ್ತು.
ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳು ಬಹಿರಂಗಪಡಿಸದಿದ್ದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳು ಅಂತಹ ಹೊಂದಾಣಿಕೆಗಳಿಗೆ ಕೊಡುಗೆ ನೀಡುತ್ತವೆ.
ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.