alex Certify ಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್

ಬಂಟ್ವಾಳ: ಕೋಳಿ ಮಾಂಸ ತಂದಿದ್ದ ಪ್ರಯಾಣಿಕನನ್ನು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಕೆಳಗಿಳಿಸಲು ಯತ್ನಿಸಿದ ಘಟನೆ ಇತ್ತೀಚೆಗಷ್ಟೇ ನಡೆದಿದ್ದು, ಇದು ಮಾಸುವ ಮೊದಲೇ ಮತ್ತೊಂದು ಘಟನೆ ನಡೆದಿದೆ.

ತೆಂಗಿನೆಣ್ಣೆ ಸಾಗಿಸುತ್ತಿದ್ದ ಮಹಿಳೆಯನ್ನು ಕಂಡಕ್ಟರ್ ಬಸ್ ನಿಂದ ಕೆಳಗಿಳಿಸಿದ ಘಟನೆ ಬಿಸಿ ರೋಡ್ ನಲ್ಲಿ ನಡೆದಿದೆ. ಸಾರಿಗೆ ಬಸ್ ನಲ್ಲಿ ಮಂಗಳೂರಿನಿಂದ ಹಾಸನಕ್ಕೆ ಮಹಿಳೆಯೊಬ್ಬರು ಗೋಣಿಚೀಲದಲ್ಲಿ ಮೂರು ಕ್ಯಾನ್ ತೆಂಗಿನೆಣ್ಣೆ ತೆಗೆದುಕೊಂಡು ಪ್ರಯಾಣಿಸಿದ್ದಾರೆ.

ಇದನ್ನು ಗಮನಿಸಿದ ಕಂಡಕ್ಟರ್ ಎಣ್ಣೆ ಪದಾರ್ಥಗಳನ್ನು ಬಸ್ ನಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಗಳ ಮಾಡಿ ಬಲವಂತದಿಂದ ಬಸ್ ನಿಂದ ಕೆಳಗೆ ಇಳಿಸಿದ್ದಾನೆ. ತೆಂಗಿನ ಎಣ್ಣೆ ಕ್ಯಾನ್ ಅಲ್ಲೇ ಬಿಟ್ಟು ಬಸ್ ನಿಂದ ಕೆಳಗಿಳಿದ ಮಹಿಳೆ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿದ್ದ ಸಂಚಾರ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ಚಾಲಕನಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದು, ಅದೇ ಬಸ್ ನಲ್ಲಿ ಮಹಿಳೆ ತೆಂಗಿನೆಣ್ಣೆ ಸಮೇತ ಹಾಸನಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...