
ತೈಲ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಸಾವನ್ನಪ್ಪಿರುವ ಘಟನೆ ಮುಂಬೈ- ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮನೋಹರ್ ಮಸ್ತಾನ್ ನಾಕಾ ಫ್ಲೈಓವರ್ ನಿಂದ ತೈಲ ಟ್ಯಾಂಕರ್ ಕೆಳಗೆ ಬಿದ್ದಿದೆ. ಆಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳಾವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಪಘಾತದ ವೇಳೆ ಸಣ್ಣ ಪ್ರಮಾಣದ ಬೆಂಕಿ ಸಂಭವಿಸಿದೆ. ತಕ್ಷಣ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಸದ್ಯ ತೈಲ ಟ್ಯಾಂಕರ್ ನಲ್ಲಿದ್ದ ಪೆಟ್ರೋಲಿಯಂ ಉತ್ಪನ್ನಕ್ಕೆ ಬೆಂಕಿ ತಗುಲಿಲ್ಲ. ಇದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ತೈಲ ಟ್ಯಾಂಕರ್ ಮುಂಬೈನಿಂದ ಗುಜರಾತ್ ನತ್ತ ಸಾಗುತ್ತಿತ್ತು. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.