alex Certify ಆಯಿಲ್ ಟ್ಯಾಂಕರ್ ಗೆ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯಿಲ್ ಟ್ಯಾಂಕರ್ ಗೆ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ವಾಹನ

ಹಾಸನ: ಆಯಿಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆಯೇ ವಾಹನ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಲಾರಿ ನಿಲ್ಲಿಸಿ, ಸ್ಥಳೀಯರ ನೆರವಿಂದ ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗದೇ ಕ್ಷಣಾರ್ಧದಲ್ಲಿ ಬೆಂಕಿ ವಾಹನದ ತುಂಬೆಲ್ಲ ವ್ಯಾಪಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸಂಭವಿಸಲಿದ್ದ ಭಾರಿ ಅವಘಡವನ್ನು ತಪ್ಪಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ದಿಯುಂಟಾಗಿತ್ತಲ್ಲದೇ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...