ವಾಷಿಂಗ್ಟನ್: ಒಕ್ಲಹೋಮಾದ ಟುಲ್ಸಾದ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ. ಶಂಕಿತ ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಗಾಯಾಳುಗಳನ್ನು ರಕ್ಷಿಸಲಾಗಿದೆ. ಉಪ ಪೊಲೀಸ್ ಮುಖ್ಯಸ್ಥ ಜೊನಾಥನ್ ಬ್ರೂಕ್ಸ್, ನಾಲ್ಕು ನಾಗರಿಕರು ಮೃತಪಟ್ಟಿದ್ದಾರೆ. ಒಬ್ಬ ಶೂಟರ್ ಸತ್ತಿದ್ದಾನೆ ಎಂದು ಹೇಳಿದ್ದಾರೆ.
ಇನ್ನೂ ಗುರುತಿಸದ ಶೂಟರ್ ಗೆ ಮಾರಣಾಂತಿಕ ಗುಂಡೇಟಿನ ಗಾಯಗಳಾಗಿವೆ. ಆತನ ಗುರುತು ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಶನಿವಾರ ಟೆಕ್ಸಾಸ್ ನ ಶಾಲೆಯಲ್ಲಿ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದರು.