ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ ತಮಿಳುನಾಡಿನಲ್ಲಿ ಆರಂಭವಾಗುತ್ತಿದ್ದು, ಓಲಾ ಕಂಪನಿ ಈ ಕುರಿತಂತೆ ಅಲ್ಲಿನ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.
ಕೃಷ್ಣಗಿರಿ ಹಾಗೂ ಧರ್ಮಪುರಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ 2,000 ಎಕರೆ ಜಾಗದಲ್ಲಿ ಈ ವಾಹನ ಉತ್ಪಾದನಾ ಘಟಕ ಆರಂಭವಾಗಲಿದ್ದು, ಓಲಾ ಎಲೆಕ್ಟ್ರಿಕ್ ಕಾರು ಹಾಗೂ ಬೈಕುಗಳನ್ನು ಉತ್ಪಾದಿಸಲಾಗುತ್ತದೆ.
7614 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಮ್ಮುಖದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಓಲಾ ಸಿಇಒ ಭವೀಶ್ ಅಗರ್ವಾಲ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಓಲಾ ಕಂಪನಿ ಪ್ರಸ್ತುತ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾತ್ರ ಉತ್ಪಾದಿಸುತ್ತಿದ್ದು, ಈಗ ಕಾರು ಮಾರುಕಟ್ಟೆಗೂ ಲಗ್ಗೆ ಇಡಲಿದೆ. ಈಗ ಆರಂಭವಾಗುತ್ತಿರುವ ಉತ್ಪಾದನಾ ಘಟಕದಲ್ಲಿ 3000ಕ್ಕೂ ಅಧಿಕ ಮಂದಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಲಾಗಿದೆ.