ನವದೆಹಲಿ : 2022 ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.
ಈ ಹಿಂದೆ ಕೆಲ ಬಾಲಾ ಅಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ ಇಂದು ಮತ್ತೆ 35 ಆರೋಪಿಗಳಿಗೆ ಜಾಮೀನು ನೀಡಿದೆ.
ಏನಿದು ಘಟನೆ
ಯುವಕನೊಬ್ಬ ಮಸೀದಿಯ ಮೇಲೆ ಭಗವಾಧ್ವಜ ಹಾರಿಸಿ ಚಿತ್ರವೊಂದನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದ ಎಂಬ ವಿವಾದದೊಂದಿಗೆ ಇಲ್ಲಿ ಗಲಭೆ ಆರಂಭವಾಗಿತ್ತು. ನಂತರ ಪೊಲೀಸರು ಆರೋಪಿತ ಯುವಕನನ್ನು ಬಂಧಿಸಿದ್ದರು.
ಇದರಿಂದ ರೊಚ್ಚಿಗೆದ್ದ ಹಳೆ ಹುಬ್ಬಳ್ಳಿಯ ಮುಸ್ಲಿಮರು 2022ರ ಏಪ್ರಿಲ್ 16ರಂದು ರಾತ್ರಿ ಹಳೇ ಹುಬ್ಬಳ್ಳಿ ಠಾಣೆ ಎದುರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಯುವಕನನ್ನು ತಮಗೆ ಒಪ್ಪಿಸುವಂತೆ ಗಲಾಟೆ ನಡೆಸಿದ್ದರು. ಪೊಲೀಸ್ ಠಾಣೆ ಮೇಲೆ ಕಲ್ಲಿನ ಕಲ್ಲು ತೂರಿ ದಾಂಧಲೆ ನಡೆಸಿದ್ದರು. ಆಸ್ಪತ್ರೆ, ದೇವಸ್ಥಾನ, ಮನೆಗಳ ಮೇಲೂ ಕಲ್ಲು ಎಸೆದು ದಾಂಧಲೆ ನಡೆಸಿದ್ದರು.