
ಮೈಸೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಪ್ರಣಾಳಿಕೆಯಲ್ಇ ನೀಡಿದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬದ್ಧರಾಗಿದ್ದೇವೆ. ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಲಾಗುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹಳೆಯ ಪಿಂಚಣಿ ಯೋಜನೆಗಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಿ ನೌಕರರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರುಗೆ ತರುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಕಳೆದ ಕೆಲವು ದಿನಗಳಿಂದ ವಿವಿಧ ಸಂಘಟನೆಗಳು ವಿವಿಧ ಪ್ರತಿಭಟನೆಗಳನ್ನು ನಡೆಸುತ್ತಿವೆ.