ತುಮಕೂರು : ರಾಜ್ಯ ಸರ್ಕಾರಿ ನೌಕರರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಎನ್ ಪಿಎಸ್ ನಿಂದ ಒಪಿಎಸ್ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ತುಮಕೂರಿನ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್ ಪಿಎಸ್ ನಿಂದ ಒಪಿಎಸ್ ಸಂಬಂಧ ರಚಿಸಲಾಗಿರುವ ಸಮಿತಿಯು ವರದಿ ನೀಡಿದ ನಂತರ ಒಪಿಎಸ್ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು 7 ನೇ ವೇತನ ಆಯೋಗ ಸಂಬಂಧ ರಚಿಸಿರುವ ಸಮಿತಿ ನವೆಂಬರ್ 23 ರೊಳಗೆ ವರದಿ ನೀಡಲಿದೆ. ಬಳಿಕ ಶೇ. 23 ರಷ್ಟು ವೇತನ ಸವಲತ್ತುಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು, ನೌಕರರು ಹಾಗೂ ಅವರ ಕುಟುಂಬ ಸದಸ್ಯರ ಆರೋಗ್ಯ ಚಿಕಿತ್ಸೆಗಾಗಿ ಆರೋಗ್ಯ ಸಂಜೀವಿನಿ ಕಾರ್ಯಕ್ರಮ ಕೂಡ ಶೀಘ್ರದಲ್ಲಿಯೇ ಅನುಷ್ಟಾನವಾಗಲಿದೆ ಎಂದು ಹೇಳಿದ್ದಾರೆ.