ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮುಖ್ಯ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದು ನೀಡಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸದಸ್ಯ ಶ್ರೀನವಾಸ ಜಿ.ಹೆಚ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್ ರವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣೆ ಯೋಜನೆಯನ್ನು ದಿನಾಂಕ:01.01.2004 ರಿಂದ ಜಾರಿಗೊಳಿಸಿರುತ್ತದೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯವು ಕೂಡ ಸರ್ಕಾರದ ಆದೇಶ ಸಂಖ್ಯೆ ಆಇ (ಎಸ್.ಪಿ.ಎಲ್.) 04 ಪಿಇಟಿ 2005/ ದಿನಾಂಕ 31.03.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ಯೋಜನೆಯನ್ನು ಜಾರಿಗೊಳಿಸಿರುತ್ತದೆ.
ರಾಜ್ಯದ ಸ್ನಾಯತ್ತ ಸಂಸ್ಥೆಗಳು ನಿಗಮ-ಮಂಡಳಿಗಳು, ವಿಶ್ವವಿದ್ಯಾನಿಲಯಗಳು, ಅನುದಾನಿತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ಸಂಘಗಳು ಸಂಸ್ಥೆಗಳಲ್ಲಿ ಪಿಂಚಣಿ ಯೋಜನೆಯನ್ನು ದಿನಾಂಕ 01.04.2006 ರಿಂದ ಜಾರಿಗೆ ಬರುವಂತೆ ಸರ್ಕಾರದ ಸುತ್ತೋಲೆ ಸಂಖ್ಯೆ ಆಇ (ವಿ) 209 ಪಿಇಎನ್ 2012, ದಿನಾಂಕ 21.02.2015 ರಲ್ಲಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಇ- 2/89/2023 ದಿನಾಂಕ 01.03.2023 ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಮಾಡಿರುವ ರಾಜ್ಯಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ ಆಟ 9/89/2023, 01.03.2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಕಾರ್ಯದರ್ಶಿಯವರಿ ಸಮಿತಿ ರಚಿಸಿ ಆದೇಶಿಸಿದೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ದಿನಾಂಕ: 19.11.2022ರ ಸರ್ಕಾರಿ ಆದೇಶ ಸಂಖ್ಯೆ ಆಇ 45 ಎಸ್.ಆರ್.ಪಿ. 2022ರಲ್ಲಿ ತ್ರಿಸದಸ್ಯರ 7ನ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಿಸಲಾಗಿರುತ್ತದ. ನಂತರ ದಿನಾಂ 06.11.2025ರ ಆದೇಶದಲ್ಲಿ ಆಯೋಗದ 15.03.2024 ರವರೆಗೆ ವಿಸ್ತರಿಸಿ ಅದೇಶಿಸಲಾಗಿರುತ್ತದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.