ಬೆಂಗಳೂರು : ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಿತ ಸರ್ಕಾರಿ ಆದೇಶದನ್ವಯ ದಿನಾಂಕ:01-04-2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01-04-2006 ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ತೀರ್ಮಾನಿಸಿ, ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ನಿಗಧಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡ ದಿ.31-06-2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆ ಸಲ್ಲಿಸಲು ಸದರಿ ಆದೇಶದಲ್ಲಿ ಸೂಚಿಸಿರುವುದರಿಂದ ನಿಗಧಿತ ಅವಧಿಯೊಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ.
ಆದುದರಿಂದ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ದಿ:01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳನ್ನಯ ನೇಮಕಾತಿಗೊಂಡು ದಿ:01- 04-2006 ರಂದು ಅಥವಾ ತದನಂತರ ಸೇವೆಗೆ ಸೇರಿ ಇಲಾಖೆಯ ಅಧೀನ ಸಂಸ್ಥೆಗಳಲ್ಲಿ ಹಾಗೂ ಈ ಇಲಾಖೆಯಿಂದ ನಿಯೋಜನೆಗೊಂಡು ಇತರೆ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಧಿಕಾರಿ/ ನೌಕರರಿಂದ ನಿಗಧಿತ ನಮೂನೆಯಲ್ಲಿ ಅಭಿಮತ ಪತ್ರವನ್ನು ಪಡೆದು ಪರಿಶೀಲಿಸಿ, ಖಚಿತಪಡಿಸಿಕೊಂಡು, ಅಂತಹ ಅರ್ಹ ಗ್ರೂಪ್-ಡಿ ನೌಕರರ ಮಾಹಿತಿಯನ್ನು ಕ್ರೋಢೀಕರಿಸಿ ದಿನಾಂಕ:10-03-2024 ರೊಳಗಾಗಿ ನಿರ್ದೇಶನಾಲಯದ ಸಂಬಂಧಿಸಿದ ವಿಭಾಗಗಳಿಗೆ ಮುದ್ರಾಮು ಸಲ್ಲಿಸಲು ಸೂಚಿಸಿದೆ.
ಈ ಸುತ್ತೋಲೆಯೊಂದಿಗೆ ಉಲ್ಲೇಖಿತ ಸರ್ಕಾರದ ಆದೇಶ ಪ್ರತಿ ಮತ್ತು ನಿಗಧಿತ ನಮೂನೆಯನ್ನು ಲಗತ್ತಿಸಿದ್ದು, ತಮ್ಮ ಅಧೀನದ ಅಧಿಕಾರಿ/ ಸಿಬ್ಬಂದಿಗಳಿಗೆ ತಿಳಿಸಲು ಕ್ರಮಕೈಗೊಳ್ಳುವುದು.