alex Certify ಆಭರಣ ಪ್ರಿಯರಿಗೆ ಖುಷಿ ಸುದ್ದಿ: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಖುಷಿ ಸುದ್ದಿ: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ….!

ಬಂಗಾರ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಆಗಸ್ಟ್ ನಾಲ್ಕನೇ ವಾರದ ಮೂರನೇ ದಿನ ಬುಧವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 272 ರೂಪಾಯಿ ಇಳಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,340 ರೂಪಾಯಿಯಾಗಿದೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಬುಧವಾರ ಇಳಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಬೆಲೆ 423 ರೂಪಾಯಿಗಳಷ್ಟು ಕಡಿಮೆಯಾಗಿದೆ. ಈ ಇಳಿಕೆ ನಂತ್ರ ಪ್ರತಿ ಕೆಜಿ ಬೆಳ್ಳಿ ಬೆಲೆ 63073 ರೂಪಾಯಿಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಯುಎಸ್ ನಲ್ಲಿ ಚಿನ್ನದ ಬೆಲೆ 1,796.26 ಡಾಲರ್ ಪ್ರತಿ ಔನ್ಸ್ ಆಗಿದೆ. ಬೆಳ್ಳಿ ಬೆಲೆ 23.73 ಡಾಲರ್ ಪ್ರತಿ ಔನ್ಸ್ ಆಗಿದೆ. ಬೆಳ್ಳಿ ಬೆಲೆ 0.10 ಡಾಲರ್ ಇಳಿಕೆ ಕಂಡಿದ್ದು, ಬಂಗಾರದ ಬೆಲೆ 5.85 ಡಾಲರ್ ಇಳಿಕೆ ಕಂಡಿದೆ.

ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 44,596 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 48,650 ರೂಪಾಯಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...