ಒಲಿಂಪಿಕ್ನಲ್ಲಿ ಚಿನ್ನದ ಪದಕ ಸಂಪಾದಿಸಿದ್ದ ಆಸ್ಟ್ರೇಲಿಯಾದ ಈಜುಗಾರ್ತಿ ಮ್ಯಾಡಿಸನ್ ವಿಲ್ಸನ್ ಕೋವಿಡ್ 19 ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡೂ ಡೋಸ್ ಲಸಿಕೆಗಳನ್ನು ಸ್ವೀಕರಿಸಿರುವ ವಿಲ್ಸನ್ ಕೋವಿಡ್ ಹಿನ್ನೆಲೆಯಲ್ಲಿ ಇಟಲಿಯ ಅಂತಾರಾಷ್ಟ್ರೀಯ ಸ್ವಿಮ್ ಲೀಗ್ನಿಂದ ಹಿಂದೆ ಸರಿದಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ವಿಲ್ಸನ್ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಈಗ ವಿಶ್ರಾಂತಿಯನ್ನು ಪಡೆಯುತ್ತಿದ್ದೇನೆ. ಶೀಘ್ರದಲ್ಲೇ ನಾನು ಸಹಜ ಸ್ಥಿತಿಗೆ ಮರಳುತ್ತೇನೆ ಎಂಬ ನಂಬಿಕೆ ಇದೆ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
27 ವರ್ಷದ ಈಜುಪಟು ಟೋಕಿಯೋ ಒಲಿಂಪಿಕ್ಸ್ನಲ್ಲಿ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಿದ್ದರು. 4×100 ಮೀಟರ್ ಫ್ರೀಸ್ಟೈಲ್‌ನಲ್ಲಿ ಚಿನ್ನದ ಪದಕ ಹಾಗೂ 4×200 ಫ್ರೀ ರಿಲೆಯಲ್ಲಿ ಕಂಚಿನ ಪದಕವನ್ನು ಸಂಪಾದಿಸಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ನಲ್ಲಿ ವಿಲ್ಸನ್ ರಿಲೇಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಸಂಪಾದಿಸಿದ್ದರು.
ನಾನು ಎರಡು ಡೋಸ್ ಲಸಿಕೆಗಳನ್ನು ಪಡೆದುಕೊಂಡಿದ್ದೇನೆ ಹಾಗೂ ಕೊರೊನಾದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿದ್ದೇನೆ. ಆದರೂ ನಾನು ಸೋಂಕಿಗೆ ಒಳಗಾಗಿದ್ದೇನೆ ಎಂದು ವಿಲ್ಸನ್ ಹೇಳಿದ್ದಾರೆ.