ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಭಾರತದಲ್ಲಿನ ನಿನ್ನೆ ಒಂದೇ ದಿನ 39 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ತೆಲಂಗಾಣ 14, ಗುಜರಾತ್ 9, ಕೇರಳ 9, ರಾಜಸ್ಥಾನದಲ್ಲಿ 4 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಹರ್ಯಾಣ, ಉತ್ತರಾಖಂಡ್, ಆಂಧ್ರಪ್ರದೇಶದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.
ಕೊರೋನಾ ರೂಪಾಂತರಿ ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗುತ್ತದೆ. ದೇಶದಲ್ಲಿ ಕೊರೋನಾ ಮತ್ತು ಒಮಿಕ್ರಾನ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅವಲೋಕನ ನಡೆಸಲಾಗುವುದು.