alex Certify ಒಮಿಕ್ರಾನ್​ ಆತಂಕ: ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಸಿಂಧಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್​ ಆತಂಕ: ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಸಿಂಧಿಯಾ

ಒಮಿಕ್ರಾನ್​ ಕುರಿತಂತೆ ರಾಜ್ಯ ಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಪುನಾರಂಭಗೊಳಿಸುವ ಮುನ್ನವೇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಪುನಾರಂಭಗೊಳ್ಳುತ್ತಿರುವ ವಿಚಾರವಾಗಿ ಆಪ್​ ಸಂಸದ ಸುಶೀಲ್​ ಗುಪ್ತಾ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜ್ಯೋತಿರಾಧಿತ್ಯ ಸಿಂಧಿಯಾ, ಅಂತಾರಾಷ್ಟ್ರೀಯ ಆರೋಗ್ಯ ಮಾರ್ಗಸೂಚಿ ಹಾಗೂ ಜಾಗತಿಕ ಲಸಿಕೆಯ ಪ್ರಮಾಣವನ್ನು ಗಮನದಲ್ಲಿರಿಸಿ ಡಿಸೆಂಬರ್​ 15ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸಲು ಸರ್ಕಾರ ಇತ್ತೀಚೆಗಷ್ಟೇ ನಿರ್ಧಾರ ಕೈಗೊಂಡಿದೆ.

ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾದ ಹೊಸ ರೂಪಾಂತರಿಯ ಬಗ್ಗ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಜಾಗರೂಕತೆಯಿಂದ ಮುಂದಿನ ಹೆಜ್ಜೆ ಇಡುತ್ತಿದೆ. ಈ ಬಗ್ಗೆ ಇತರೆ ಸಚಿವಾಲಯಗೊಂದಿಗೆ ಚರ್ಚೆ ನಡೆಸಿ ಯಾವುದೇ ಮುಂದಿನ ನಿರ್ಧಾರವನ್ನು ಅತ್ಯಂತ ಜಾಗರೂಕತೆಯಿಂದ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...