
ಬೆಂಗಳೂರು: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ದೀಪಾವಳಿ ಹಬ್ಬ ಮತ್ತು ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಕಾಣಿಸಿಕೊಂಡರೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.
ಉಸಿರಾಟದ ಸಮಸ್ಯೆ ಇರುವವರು ಹತ್ತಿರದ ಆಸ್ಪತ್ರೆಗೆ ತೆರಳಬೇಕು.
ಜನನಿಬಿಡ ಪ್ರದೇಶ, ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್ ಕಡ್ಡಾಯವಾಗಿರುತ್ತದೆ.
ಹಬ್ಬಗಳನ್ನು ಆದಷ್ಟು ಹೊರಾಂಗಣದಲ್ಲಿ ಆಚರಿಸಬೇಕು.
ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಟೋಸ್ ಪಡೆಯಬೇಕು.
ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
ಕೈಗಳನ್ನು ಸಾಬೂನಿನಿಂದ ಆಗಾಗ ತೊಳೆದುಕೊಳ್ಳಬೇಕು.
ಸೋಂಕಿನ ಲಕ್ಷಣ ಇರುವವರಿಂದ ದೂರ ಇರಬೇಕು.
ಆರೋಗ್ಯದ ದೃಷ್ಟಿಯಿಂದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂದು ಹೇಳಲಾಗಿದೆ.