ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ರೂಪಾಂತರಿ ಒಮಿಕ್ರಾನ್ ಸ್ಪೋಟವಾಗಿದೆ. ಹೊಸದಾಗಿ ಐದು ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಧಾರವಾಡದ 54 ವರ್ಷದ ಪುರುಷ, ಭದ್ರಾವತಿಯ 20 ವರ್ಷದ ಯುವತಿ, ಉಡುಪಿಯ 82 ವರ್ಷದ ಪುರುಷ ಮತ್ತು 73 ವರ್ಷದ ಮಹಿಳೆ ಹಾಗೂ ಮಂಗಳೂರಿನ 19 ವರ್ಷದ ಯುವತಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಜಿನೋಮಿಕ್ ಸೀಕ್ವೆನ್ಸ್ ಟೆಸ್ಟ್ನಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಸಂಖ್ಯೆಯಲ್ಲಿ ಸ್ಯಾಂಪಲ್ ಕಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ