alex Certify BIG NEWS: ಕೊರೋನಾ, ಒಮಿಕ್ರಾನ್ ಭಾರಿ ಏರಿಕೆ; ಕೇಂದ್ರದಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ, ಒಮಿಕ್ರಾನ್ ಭಾರಿ ಏರಿಕೆ; ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಮತ್ತು ರೋಗಿಗಳ ಮೇಲ್ವಿಚಾರಣೆಗೆ ‘ವಿಶೇಷ’ ತಂಡಗಳನ್ನು ರಚಿಸುವಂತೆ ಕೇಂದ್ರ ಸರ್ಕಾರ ಇಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಕೋವಿಡ್ ಪ್ರಕರಣಗಳಲ್ಲಿ ಸಂಭವನೀಯ ಉಲ್ಬಣ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲಾ ರಾಜ್ಯಗಳು/ಯುಟಿಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಕೋವಿಡ್-19 ರ ಹೊಸ ಒಮಿಕ್ರಾನ್ ರೂಪಾಂತರದ ಪ್ರಕರಣಗಳು 1400-ಮಾರ್ಕ್ ಅನ್ನು ದಾಟುತ್ತಿದ್ದಂತೆ ಈ ಬೆಳವಣಿಗೆ ನಡೆದಿದೆ.

ತಾತ್ಕಾಲಿಕ ಆಸ್ಪತ್ರೆಗಳ ರಚನೆಗಾಗಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು DRDO ಮತ್ತು CSIR, ಹಾಗೆಯೇ ಖಾಸಗಿ ವಲಯ, ನಿಗಮಗಳು ಮತ್ತು NGOಗಳು ಇತ್ಯಾದಿಗಳಿಂದ ಸಹಾಯ ಪಡೆಯಲು ಸಲಹೆ ನೀಡಲಾಗಿದೆ. ಇದು ಕ್ಷೇತ್ರ ಆಸ್ಪತ್ರೆಗಳು ಅಥವಾ ತಾತ್ಕಾಲಿಕ ಆಸ್ಪತ್ರೆಗಳ ತ್ವರಿತ ರಚನೆಯ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ. ಸರ್ಕಾರಿ ಮತ್ತು ಖಾಸಗಿ ವಲಯದ ಕೋವಿಡ್‌ಗೆ ಮೀಸಲಾದ ಆಸ್ಪತ್ರೆಗಳಿಗೆ ಸಂಬಂಧಿಸಿರುವ ಹೋಟೆಲ್‌ ಕೊಠಡಿಗಳು ಮತ್ತು ಇತರ ವಸತಿ ಸೌಕರ್ಯಗಳನ್ನು ರಾಜ್ಯಗಳು ಪರಿಗಣಿಸಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೀಸಲಾದ ಕೋವಿಡ್ ಆರೋಗ್ಯ ಮೂಲಸೌಕರ್ಯವನ್ನು ಮರುಪರಿಶೀಲಿಸುವಂತೆ ಮತ್ತು ಅದರ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೂಷಣ್ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳು ಮತ್ತು ಮಕ್ಕಳ ಪ್ರಕರಣಗಳ ಬಗ್ಗೆ ವಿಶೇಷ ಗಮನ ನೀಡುವಂತೆ ಅವರು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...