
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐದು ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ನಾಲ್ವರು ಪುರುಷರು ಮತ್ತು ಓರ್ವ ಮಹಿಳೆಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಯುಕೆ, ದೆಹಲಿ, ನೈಜೀರಿಯಾ, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದ ಈ ಐದು ಮಂದಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ ಎಂದು ಸಚಿವರು ಹೇಳಿದ್ದಾರೆ.