ದಾವಣಗೆರೆ: ಓಮಿನಿ ವ್ಯಾನ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ.
ನಂಜುಂಡಪ್ಪ (83), ದೇವರಾಜ್ (27), ರಾಕೇಶ್ (30) ಮೃತ ದುರ್ದೈವಿಗಳು. ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.