ಬೆಂಗಳೂರು : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು.
ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ #KPSC #GovtJobs pic.twitter.com/aDuxUiRRWM
— Siddaramaiah (@siddaramaiah) March 12, 2025