ಬೆಂಗಳೂರು : ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಹಿಂದೆ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆಗಸ್ಟ್ 30ಕ್ಕೆ ಬೆಂಗಳೂರಿಗೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದರು.
ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.ವಿವಿಧ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ದಿನಾಂಕ ಮುಂದೂಡಲಾಗಿದ್ದು, ಈಗ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.ಈ ಮೊದಲು ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ದಿನಾಂಕವನ್ನು ಕೂಡ ಹಲವು ಬಾರಿ ಮುಂದೂಡಲಾಗಿತ್ತು. ಈಗ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.