ಪಟ್ನಾ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ.
ಮಾರ್ಚ್ 8 ರಂದು ಬಿಹಾರದ ಪಟ್ನಾದ ಪೆಟಿಯಾ ಬಜಾರ್‌ನಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ.
ಪ್ರಿಯಾ ಧೋತ್ರೆ ಎಂಬ ಪ್ರಾಣಿ ಪ್ರೇಮಿ ಈ ಆಘಾತಕಾರಿ ವೀಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಹೋಳಿ ದಿನದಂದು ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿರುವ ಪ್ರಿಯಾ ಅವರು, ಬೀದಿ ನಾಯಿಯೊಂದಿಗೆ ವ್ಯಕ್ತಿಯೊಬ್ಬ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪಟ್ನಾದ ಫುಲ್ವಾರಿ ಸರೀಫ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂತಹ ಭೀಕರ ಅಪರಾಧ ಎಸಗಿರುವ ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಪ್ರಾಣಿ ದಯಾ ಸಂಘದವರು ಆಗ್ರಹಿಸಿದ್ದಾರೆ.