alex Certify ಹಾಡಹಗಲೇ ನಡೆದಿದೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ನಡೆದಿದೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಘಟನೆ

ಪಟ್ನಾ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ.

ಮಾರ್ಚ್ 8 ರಂದು ಬಿಹಾರದ ಪಟ್ನಾದ ಪೆಟಿಯಾ ಬಜಾರ್‌ನಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ.

ಪ್ರಿಯಾ ಧೋತ್ರೆ ಎಂಬ ಪ್ರಾಣಿ ಪ್ರೇಮಿ ಈ ಆಘಾತಕಾರಿ ವೀಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಹೋಳಿ ದಿನದಂದು ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿರುವ ಪ್ರಿಯಾ ಅವರು, ಬೀದಿ ನಾಯಿಯೊಂದಿಗೆ ವ್ಯಕ್ತಿಯೊಬ್ಬ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪಟ್ನಾದ ಫುಲ್ವಾರಿ ಸರೀಫ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂತಹ ಭೀಕರ ಅಪರಾಧ ಎಸಗಿರುವ ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಪ್ರಾಣಿ ದಯಾ ಸಂಘದವರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...