ಪತನಗೊಂಡ ವಿಮಾನದ ಕೊನೆಕ್ಷಣದ ಭಯಾನಕ ವಿಡಿಯೋ ವೈರಲ್

ನವದೆಹಲಿ: ಭಾನುವಾರ ಪೋಖರಾದಲ್ಲಿ ಪತನಗೊಂಡ ನೇಪಾಳದ ವಿಮಾನದ ಕೊನೆಯ ಕ್ಷಣಗಳನ್ನು ತೋರಿಸುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಯೇತಿ ಏರ್‌ಲೈನ್ಸ್ ವಿಮಾನ ಬೆಳಗ್ಗೆ 11 ಗಂಟೆ ಸುಮಾರಿಗೆ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಪತನಗೊಂಡಿದೆ. ವಿಮಾನವು ಕಠ್ಮಂಡುವಿನಿಂದ ಹೊರಟಿತ್ತು.

ಭಯಾನಕ ವಿಡಿಯೋದಲ್ಲಿ, ವಿಮಾನದ ಅಂತಿಮ ಕ್ಷಣಗಳನ್ನು ಸೆರೆಹಿಡಿಯಲಾಗಿದೆ. ವಿಮಾನದಲ್ಲಿ ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ ತಿಳಿಸಿದ್ದಾರೆ. ಅಪಘಾತದಲ್ಲಿ ಹಲವರು ಸಾವನ್ನಪ್ಪಿದ್ದು, ಅದರ ಸಂಪೂರ್ಣ ಮಾಹಿತಿ ತಿಳಿಯಬೇಕಿದೆ.

https://twitter.com/Ex0dvs/status/1614561141220597761

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read