ಜೈಪುರ ಕಾಲೇಜೊಂದರಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳನ್ನು ಬಳಸಲಾಗಿದೆ. ಇದಕ್ಕೆ ಇಂಬು ಕೊಟ್ಟಂತೆ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಸ್ಪರ ಹಾಕಿ ಸ್ಟಿಕ್ ಸೇರಿದಂತೆ ಇನ್ನಿತರೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ದೃಶ್ಯಗಳು ಸೆರೆಯಾಗಿವೆ.
ಕೆಲವು ವಿದ್ಯಾರ್ಥಿಗಳು ಸ್ಟಿಕ್ ಗಳಿಂದ ಹೊಡೆದಾಡಿಕೊಂಡಿದ್ದರೆ, ಇನ್ನೂ ಕೆಲವರು ಪರಸ್ಪರ ಕೈಗಳಿಂದ ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯೊಬ್ಬ ತನ್ನನ್ನು ತಾನು ರಕ್ಷಿಸಿಕೊಳ್ಳಲು ಡಸ್ಟ್ ಬಿನ್ ಅನ್ನು ಅಡ್ಡಲಾಗಿ ಇಟ್ಟುಕೊಂಡಿದ್ದರೆ, ಆತನ ಮೇಲೆ ಹಲ್ಲೆ ನಡೆಸಲು ಮತ್ತೊಬ್ಬ ವಿದ್ಯಾರ್ಥಿ ಬಡಿಗೆ ಸಮೇತ ಮುನ್ನುಗ್ಗುತ್ತಿರುವ ದೃಶ್ಯ ಸೆರೆಯಾಗಿದೆ.
ಆದರೆ, ಈ ಘರ್ಷಣೆ ಬಗ್ಗೆ ಇದುವರೆಗೆ ಯಾವುದೇ ದೂರು ಅಥವಾ ಎಫ್ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ.