
ಅಮಿಟಿ ವಿಶ್ವವಿದ್ಯಾಲಯದ ತರಗತಿಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜರುಗಿದ ಬೆನ್ನಲ್ಲೇ ಐದು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತರಗತಿಯಲ್ಲಿ ಶಿಕ್ಷಕಿ ಇದ್ದರೂ ಸಹ ವಿದ್ಯಾರ್ಥಿಗಳ ಈ ಜಗಳ ಮುಂದುವರೆದಿದೆ.
ಅಂಕುಶ್ ಚಪ್ರಾನಾ ಹಾಗೂ ಇತರರ ನಡುವೆ ತರಗತಿಯ ಆಸನವೊಂದರ ವಿಚಾರವಾಗಿ ಜಗಳ ನಡೆದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ನೋಯಿಡಾ ಸೆಕ್ಟರ್ 126 ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಚಪ್ರಾನಾ ದಾಖಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಐದು ವಿದ್ಯಾರ್ಥಿಗಳನ್ನು ಅವರ ಹೆತ್ತವರಿಗೆ ನೋಟಿಸ್ ಕಳುಹಿಸಿ ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ.