
ಮಧ್ಯಪದೇಶದ ರತ್ನಾಂ ಜಿಲ್ಲೆಯಲ್ಲಿ ರಸ್ತೆಬದಿಯಲ್ಲಿ ಇದ್ದ, ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ನೊ ಮಾಹಿತಿಯನ್ನ ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಚಕ್ರ ಸ್ಫೋಟಗೊಂಡ ಕಾರಣಕ್ಕೆ ಚಾಲಕ ನಿಯಂತ್ರಣವನ್ನ ಕಳೆದುಕೊಂಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ರತ್ನಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತುಂಡಾ ಗ್ರಾಮದ ರತ್ನಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ.
ಸದ್ಯಕ್ಕೆ ಟ್ರಕ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನ ವಿಚಾರಣೆಗೆ ಒಳಪಡಿಸಿ ಘಟನೆ ಕುರಿತು ಕೂಲಂಕೂಶವಾಗಿ ತನಿಖೆ ಮಾಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.