alex Certify BIG NEWS : ಸೆ.15 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸೆ.15 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸೆ.15 ರಂದು  ರಾಜ್ಯ ಎಲ್ಲಾ ಶಾಲಾ ವಿದ್ಯಾರ್ಥಿಗಳು ‘ಸಂವಿಧಾನ ಪೀಠಿಕೆ’ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ.
ಉಲ್ಲೇಖಿತ (4) ರ ಆದೇಶದಲ್ಲಿ, ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆ ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಕನ್ನಡ ಮತ್ತು ಆಂಗ್ಲ ಭಾಷೆಯ ಆವೃತ್ತಿಯನ್ನು ಬಳಸಿಕೊಳ್ಳುವ ಸಂಬಂಧ ಪೀಠಿಕೆ ಮಾದರಿಯನ್ನು ನೀಡಲಾಗಿದೆ.

ಉಲ್ಲೇಖಿತ (2) ರ ಈ ಕಛೇರಿಯ ಸುತ್ತೋಲೆಯಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಓದುವ ಕುರಿತು ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ.
ದಿನಾಂಕ:15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದ ವಿಶಾಲವಾದ ಮೆಟ್ಟಿಲುಗಳು ಮತ್ತು ಪ್ರದೇಶದಲ್ಲಿ 10,000 ವಿದ್ಯಾರ್ಥಿಗಳೊಡನ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ. ಈ ಹಿನ್ನೆಲೆ ಆನ್ ಲೈನ್ ನಲ್ಲಿ ನೋಂದಾಯಿಸುವ ಮೂಲಕ ಏಕಕಾಲದಲ್ಲಿ ಆನ್ ಲೈನ್ (Virtual) ಮೂಲಕ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿರುತ್ತದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳು ಭಾಗವಹಿಸಿ ಯಶಸ್ವಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕೆಂದು ತಿಳಿಸಿರುತ್ತಾರೆ.ದಿನಾಂಕ:15.09.2023ರಂದು ‘ಅಂತರ ರಾಷ್ಟ್ರೀಯ ಪುಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು ಶಾಲೆಯ ಎಲ್ಲಾ ಮುಖ್ಯಸ್ಥರು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...