alex Certify ‘ಒಂದು ದೇಹ ಎಂಟು ಜೀವ, ಅಂಗಾಂಗ ದಾನ ಮಾಡಿ ಜೀವ ಉಳಿಸಿ’ : ಆರೋಗ್ಯ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಒಂದು ದೇಹ ಎಂಟು ಜೀವ, ಅಂಗಾಂಗ ದಾನ ಮಾಡಿ ಜೀವ ಉಳಿಸಿ’ : ಆರೋಗ್ಯ ಇಲಾಖೆ

ಬೆಂಗಳೂರು : ಒಂದು ದೇಹ ಎಂಟು ಜೀವ,ಅಂಗಾಂಗ  ದಾನ ಮಾಡಿ ಜೀವ ಉಳಿಸಿ, ಮರಣದ ನಂತರವೂ ಇನ್ನೊಬ್ಬರ ಜೀವನಕ್ಕೆ ಬೆಳಕಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿವರು “ಮುಖ್ಯಮಂತ್ರಿಗಳಾದ ಸಿದ್ದರಾಮಯಯ್ಯ ನವರು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಅಂಗಾಂಗ ದಾನ ಮಾಡಿದ 7 ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಯಿತು. ರಾಜ್ಯದಲ್ಲಿ ಅಂಗಾಂಗ ದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ’’ ಎಂದಿದ್ದಾರೆ.

ಜೀವಸಾರ್ಥಕತೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಂಗಾಂಗ ದಾನಕ್ಕೆ ಒತ್ತು ನೀಡಿದರೆ ಜೀವಗಳನ್ನು ಉಳಿಸಬಹುದು. ಒಬ್ಬ ಮೃತ ವ್ಯಕ್ತಿಯ ಅಂಗಾಂಗ ದಾನದಿಂದ 8 ಜೀವಗಳನ್ನು ಉಳಿಸಬಹುದು. ಯಾವುದೇ ವಯಸ್ಸು ಲಿಂಗ ಭೇದವಿಲ್ಲದೆ ಅಂಗಾಂಗ ಮತ್ತು ಅಂಗಾಂಶಗಳನ್ನು ದಾನ ಮಾಡಬಹುದು. ಪ್ರತಿಯೊಬ್ಬರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಂಡು ಮತ್ತೊಬ್ಬರ ಜೀವಕ್ಕೆ ಸಂಜೀವಿನಿಯಾಗಿ ಎಂದು ಅವರು ಮನವಿ ಮಾಡಿದ್ದಾರೆ.

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...