ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಲಾಗುವುದು. ಗ್ರಾಮೀಣ ಪ್ರತಿಭೆಗಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜನತೆಗೆ ಗುಣಮಟ್ಟದ ಚಿಕಿತ್ಸೆ ನೀಡುವ ಗುರಿ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.
ಖಾಸಗಿ ಕಾಲೇಜುಗಳು ವಿದ್ಯಾರ್ಥಿಗಳನ್ನು ವೈದ್ಯರನ್ನಾಗಿ ಮಾಡಬೇಕು. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ವಿಶ್ವಮಟ್ಟದಲ್ಲಿನ ಬದಲಾವಣೆಗಳನ್ನು ತಿಳಿಸಬೇಕು ಎಂದು ಹೇಳಿದ್ದಾರೆ.