
ಕೇರಳದಲ್ಲಿ ಅವಳಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ ನಲ್ಲಿ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 52 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯಲ್ಲಿ ಸ್ಫೋಟದಲ್ಲಿ 90 ಪ್ರತಿಶತ ಸುಟ್ಟಗಾಯಗಳಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವರು ತಿಳಿಸಿದ್ದಾರೆ. ಇದರೊಂದಿಗೆ ಸ್ಪೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.