ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪರಿಶೀಲಿಸಲು ರಚಿಸಲಾದ ಕೇಂದ್ರದ ಸಮಿತಿಯಲ್ಲಿ ಅಮಿತ್ ಶಾ, ಅಧೀರ್ ಚೌಧರಿ, ಆಜಾದ್ ಸೇರಿ 8 ಸದಸ್ಯರ ನೇಮಕ ಮಾಡಲಾಗಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಪರಿಶೀಲಿಸಲು ಕೇಂದ್ರ ಸರ್ಕಾರ ತನ್ನ 8 ಸದಸ್ಯರ ಸಮಿತಿಯನ್ನು ಶನಿವಾರ ಪ್ರಕಟಿಸಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಲೋಕಸಭೆ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಸಂಜಯ್ ಕೊಠಾರಿ ಆವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.