ನವದೆಹಲಿ: ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಮತ್ತಷ್ಟು ರಾಜ್ಯಗಳಿಗೆ ವಿಸ್ತರಿಸಲಾಗಿದೆ. ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಮಾಹಿತಿ ನೀಡಿ, ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಡಿ ಪಡಿತರ ಚೀಟಿ ಹೊಂದಿದ ವಲಸಿಗರು ತಮ್ಮ ಕಾರ್ಡ್ ಬಳಸಿಕೊಂಡು ದೇಶದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದೆ.
ಮೊದಲ ಹಂತದಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತಿನಲ್ಲಿ ಜಾರಿಗೆ ತರಲಾಗಿತ್ತು. ಎರಡನೇ ಕರ್ನಾಟಕ, ಕೇರಳ, ಜಾರ್ಖಂಡ್, ಪಂಜಾಬ್ ತ್ರಿಪುರಾದಲ್ಲಿ ಜಾರಿಗೆ ಬಂದಿದೆ. 24 ರಾಜ್ಯಗಳು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಂಡಿದೆ.
ಪಡಿತರ ಚೀಟಿದಾರರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಮತ್ತು ಕಾರ್ಡ್ ಸಂಖ್ಯೆ ನೀಡಿ ಪ್ರತಿ ತಿಂಗಳು ಪಡಿತರ ಪಡೆಯಬಹುದಾಗಿದೆ. ಬೇರೆ ರಾಜ್ಯಕ್ಕೆ ವಲಸೆ ಹೋದಾಗ ಪಡಿತರ ಪಡೆಯಬಹುದು ಎಂದು ಹೇಳಲಾಗಿದೆ.