ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಸಮಾಜದ ಮೇಲೆ ಆಗಿರುವ ಪರಿಣಾಮ ಒಂದು ವರ್ಷದ ನಂತರ ತಿಳಿಯಲಿದೆ. ಈಗಲೇ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಗದು ಎಂದು ಹೇಳಿದ್ದಾರೆ.
ನಾರಾಯಣ ಮೂರ್ತಿಯವರು ಬಂಡವಾಳಶಾಹಿಗಳು ಸಾಮಾಜಿಕ ಹೊಣೆಗಾರಿಕೆ ಹೊಂದಿರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಗ್ಯಾರಂಟಿ ಯೋಜನೆಗಳಿಂದ ಸಮಾಜದ ಮೇಲೆ ಆದ ಪರಿಣಾಮ ಏನು ಎಂಬುದು ಒಂದು ವರ್ಷದ ನಂತರ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.