ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯತ್ತ ಸಾಗಿದೆ.
ಬೆಂಗಳೂರಿನ ಕೆ.ಆರ್ ಮಾರ್ಕೆಟ್‍ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ. ಮಳೆಯಿಂದಾಗಿ ಈರುಳ್ಳಿ ಬೆಳೆ ನಷ್ಟವಾಗಿದ್ದು, ಜೊತೆಗೆ ಪೂರೈಕೆಯ ಕೊರತೆಯಿಂದಾಗಿ ಈರುಳ್ಳಿ ಬೆಲೆಯೂ ಬರುವ ಸೆಪ್ಟೆಂಬರ್ ನಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ತಿಂಗಳು ಈರುಳ್ಳಿ ಬೆಲೆ ಪ್ರತಿ ಕೆಜಿಗೆ 60-70 ರೂ.ಗೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ಪ್ರಸ್ತುತ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 30 ರೂ. ಇದ್ದು, ದೇಶಾದ್ಯಂತ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ನಷ್ಟವಾಗಿದೆ. ಹೀಗಾಗಿ ಈರುಳ್ಳಿ ಬೆಳೆ ಕಡಿಮೆ ಇರುವುದರಿಂದ ಪೂರೈಕೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.