alex Certify ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಗ್ರಾಮ ಪಂಚಾಯತಿ ಮಟ್ಟದಿಂದಲೇ ಎಲ್ಲಾ ನಾಗರಿಕ ಸೇವೆಗಳು ಜನರಿಗೆ ಆನ್​​ಲೈನ್​ನಲ್ಲಿ ಸಿಗುವಂತೆ ಆಗಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಗ್ರಾಮ ಸೇವಾ ಯೋಜನೆ ಆರಂಭಿಸಲು ನಿರ್ಧರಿಸಿದೆ.

ಐದು ಜಿಲ್ಲೆಗಳಲ್ಲಿ ಈ ಯೋಜನೆಯು ಪ್ರಾಯೋಗಿಕ ಹಂತವಾಗಿ ಆರಂಭಗೊಳ್ಳಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಎಲ್ಲಾ ನಾಗರಿಕ ಸೇವೆಗಳು ಜನರಿಗೆ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಯೋಜನೆ ಆರಂಭಕ್ಕೆ ಮುಂದಾಗಲಾಗಿದೆ. ಕಚೇರಿಗಳ ಮುಂದೆ ಗಂಟೆಗಟ್ಟಲೇ ಸಾಲು ನಿಲ್ಲೋದ್ರ ಬದಲು ಜನರ ಮನೆ ಬಾಗಿಲಿಗೆ ಆನ್​ಲೈನ್​ ಮೂಲಕ ಯೋಜನೆಗಳು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ಸೇವೆಗಳು ಗ್ರಾಮ ಪಂಚಾಯ್ತಿ ಮೂಲಕ ಜನರ ಮನೆ ಬಾಗಿಲಿಗೆ ಸಿಗಲಿ ಎಂಬ ಕಾರಣಕ್ಕೆ ಗ್ರಾಮ ಸೇವಾ ಯೋಜನೆ ಜಾರಿಗೆ ಬರಲಿದೆ. ಮುಂದಿನ ವರ್ಷ ಜನವರಿ 26ರಂದು ಈ ಯೋಜನೆಗೆ ಅಧಿಕೃತ ಚಾಲನೆ ದೊರಕಲಿದೆ. ಪ್ರಾಥಮಿಕ ಹಂತದಲ್ಲಿ ಐದು ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಲ್ಲಿರಲಿದೆ. ಯೋಜನೆಯ ಯಶಸ್ಸನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯಲ್ಲಿಯೂ ಈ ಯೋಜನೆ ಆರಂಭಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...