ಬೆಂಗಳೂರು: ನಾಳೆಯಿಂದ ಆನ್ಲೈನ್, ಆಫ್ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ.
ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನಾಳೆಯಿಂದ ಹೋರಾಟ ಕೈಗೊಳ್ಳಲಾಗುವುದು. ನಾಳೆ ಮತ್ತೆ ಶಿಕ್ಷಣ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಮತ್ತೆ ತಿಳಿಸುತ್ತೇವೆ. ಇದಾದ ನಂತರ ಎಲ್ಲ ಶೈಕ್ಷಣಿಕ ಚಟುವಟಿಕೆ ನಿಲ್ಲಿಸುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ.