ಬೆಂಗಳೂರು: ಆಗಸ್ಟ್ 23 ರಿಂದ ಪಿಯು ಕಾಲೇಜುಗಳು ಆರಂಭವಾಗಲಿವೆ. ಇದಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದ್ದು ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು. ಪದವಿ ಪೂರ್ವ ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಶೇಕಡ 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲಾಗುವುದು. ಏಕಕಾಲದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸುವುದು.
ವಾರದಲ್ಲಿ ಮೊದಲ ಮೂರು ದಿನ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ನಡೆಯಲಿದೆ. ಶೇಕಡ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಬಹುದಾಗಿದೆ. ಉಳಿದ ವಿದ್ಯಾರ್ಥಿಗಳು ಮನೆಯಲ್ಲಿಯೇ ಆನ್ಲೈನ್ ತರಗತಿ ಕೇಳಬಹುದು. ಗುರುವಾರ, ಶುಕ್ರವಾರ ಮತ್ತು ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್ ನಡೆಯಲಿದೆ.