ಬೆಂಗಳೂರು: ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ ಲೈನ್ ಗೇಮಿಂಗ್ ಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್ ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿ, ಆನ್ ಲೈನ್ ಗೇಮಿಂಗ್ ಗೆ ಅವಕಾಶ ನೀಡಿದೆ.
ಸರ್ಕಾರದ ಕ್ರಮ ಸಂವಿಧಾನ ಬದ್ಧವಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಆನ್ ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಸೂಕ್ತ ಶಾಸನ ರೂಪಿಸುವಂತೆ ತಿಳಿಸಿದೆ.