ಮಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್. ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.
ಆನ್ಲೈನ್ ಗೇಮ್, ಲೋನ್ ಅಪ್ಲಿಕೇಶನ್ ಗಳಿಂದ ಸೈಬರ್ ಕ್ರೈಂ ಹೆಚ್ಚಾಗುತ್ತಿದ್ದು, ಹೀಗಾಗಿ ಆನ್ಲೈನ್ ಗೇಮ್ ಮತ್ತು ಲೋನ್ ಅಪ್ಲಿಕೇಶನ್ ನಿಷೇಧಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದ ಸಿಎಂ, ಮಂಗಳೂರಿನಲ್ಲಿ ಡ್ರಗ್ಸ್ ಹಾವಳಿ ತಡೆಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.