alex Certify ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…!

ದೇಶದ ವಾಣಿಜ್ಯ ನಗರ ಮುಂಬೈನಲ್ಲಿ ಇರುವ ಅಧಿಕೃತ 2400 ಮಂದಿರಗಳ ಪೈಕಿ ಕೇವಲ 24 ದೇವಾಲಯಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದಿವೆ.

ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ಮತ್ತು ಹನುಮಾನ್ ಚಾಲೀಸಾ ಪಠಣ ವಿಚಾರದಲ್ಲಿ ವಾದ-ವಿವಾದಗಳು ತಾರಕಕ್ಕೇರಿರುವ ಈ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರು ಮುಂಬೈ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ನಗು ತರಿಸುತ್ತೆ 7.5 ಗಂಟೆ ತಡವಾಗಿ ಕಚೇರಿಗೆ ಬಂದ ಯುವತಿ ಕೊಟ್ಟ ಕಾರಣ

ಇರುವ 1140 ಮಸೀದಿಗಳ ಪೈಕಿ 950 ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯಲಾಗಿದೆ ಎಂದು ತಿಳಿಸಿರುವ ಪೊಲೀಸ್ ಅಧಿಕಾರಿಗಳು, ಕೇವಲ ದೇವಾಲಯಗಳು ಮತ್ತು ಮಸೀದಿಗಳು ಮಾತ್ರವಲ್ಲದೇ, ಇನ್ನಿತರೆ ಧಾರ್ಮಿಕ ಸಂಸ್ಥೆಗಳು ಸಹ ಧ್ವನಿವರ್ಧಕಗಳನ್ನು ಬಳಸಲು ಪೊಲೀಸರಿಂದ ಅನುಮತಿ ಪಡೆಯಬೇಕೆಂದು ಮನವಿ ಮಾಡಿದ್ದಾರೆ.

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮಹಾರಾಷ್ಟ್ರದಾದ್ಯಂತ ಭಾರೀ ಪ್ರತಿಭಟನೆಗಳನ್ನು ನಡೆಸುತ್ತಿದೆ. ಧ್ವನಿವರ್ಧಕಗಳಿಗೆ ಪ್ರತಿಯಾಗಿ ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಪಠಣ ಮಾಡುವಂತೆ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಕರೆ ನೀಡಿರುವುದು ರಾಜ್ಯದಲ್ಲಿ ಕೋಲಾಹಲ ಸೃಷ್ಟಿ ಮಾಡಿದೆ.

ಬುಧವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದೆದುರು ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರಲ್ಲದೇ, ನಾಸಿಕ್ ಮತ್ತು ಪುಣೆಯಲ್ಲಿಯೂ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...