ಬೆಂಗಳೂರು: ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ಕೆಲ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಇಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಆಗಲಿದ್ದು, ವೈದ್ಯರು ಒಂದು ದಿನದ ಮುಷ್ಕರ ಕೈಗೊಂಡಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಖಾಸಗಿ ಆಸ್ಪತ್ರೆ ಒಪಿಡಿ ಸೇವೆ ಸ್ಥಗಿತಗೊಳಿಸಲಾಗುವುದು. ತುರ್ತು ಸೇವೆ ಮಾತ್ರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಆಯುರ್ವೇದ ಶಿಕ್ಷಣ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ರಜೆಯನ್ನು ಕಡಿತ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕಿದೆ. ಹೊರ ರೋಗಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗಿದೆ.