alex Certify BIG NEWS: ಈ ಬಾರಿಯೇ ಓಪನ್ ಬುಕ್ ಮಾದರಿ ಪರೀಕ್ಷೆ, ವಿದ್ಯಾರ್ಥಿಗಳ ಕೈಗೆ ಕೈಪಿಡಿ ಕೊಟ್ಟು ಪರೀಕ್ಷೆ; ವಿಟಿಯು ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ಬಾರಿಯೇ ಓಪನ್ ಬುಕ್ ಮಾದರಿ ಪರೀಕ್ಷೆ, ವಿದ್ಯಾರ್ಥಿಗಳ ಕೈಗೆ ಕೈಪಿಡಿ ಕೊಟ್ಟು ಪರೀಕ್ಷೆ; ವಿಟಿಯು ಕ್ರಮ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಓಪನ್ ಬುಕ್ ಮಾದರಿ ಪರೀಕ್ಷೆ ನಡೆಸಲಾಗುವುದು. ಈ ಬಾರಿಯಿಂದಲೇ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗೆ ಓಪನ್ ಬುಕ್ ಮಾದರಿ ಪರೀಕ್ಷೆ ನಡೆಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮುಂದಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್ ಕೋರ್ಸ್ ಗಳಿಗೆ ಕೈಪಿಡಿ ನೀಡಿ ಪರೀಕ್ಷೆ ನಡೆಸಲಾಗುವುದು. ಮತ್ತೆ ಕೆಲವು ವಿಷಯಗಳಿಗೆ ಬಹು ಆಯ್ಕೆ ಮಾದರಿ ಪರೀಕ್ಷೆ ನಡೆಸಲಾಗುವುದು. ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸಾಲಿನಿಂದಲೇ ಓಪನ್ ಬುಕ್ ಮಾದರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...