ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಗೆಲುವಿಗಾಗಿ ಸಿದ್ಧತೆ ನಡೆಸಿದ್ದು, ಒಳಗೊಳಗೆ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆ ಗೆಲುವಿಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಪರೇಷನ್ ಹಸ್ತದ ಸುಳಿವು ನೀಡಿದ್ದು, ಹಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಈಗಿನಿಂದಲೇ ಡಿ.ಕೆ. ಶಿವಕುಮಾರ್ ಪ್ಲ್ಯಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಯಶವಂತಪುರ ಕ್ಷೇತ್ರದ ಎಸ್.ಟಿ.ಸೋಮಶೇಖರ್, ಯಲ್ಲಾಪುರದ ಶಿವರಾಂ ಹೆಬ್ಬಾರ್ ಹಾಗೂ ಜೆಡಿಎಸ್ ತೊರೆದಿದ್ದ ಮಹಾಲಕ್ಷ್ಮಿ ಲೇಔಟ್‌ನ ಕೆ.ಗೋಪಾಲಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಆಪರೇಷನ್ ಹಸ್ತದ ಬಗ್ಗೆ ಸುಳಿವು ನೀಡಿರುವ ಡಿ.ಕೆ. ಶಿವಕುಮಾರ್, ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಗೆ ಮತ ಪ್ರಮಾಣದ ಹೆಚ್ಚಿಸಲು ಕರೆ ಕೊಟ್ಟಿದ್ದೇವೆ. ಸ್ಥಳೀಯ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷಕ್ಕೆ ಒಳ್ಳೆದಾಗುವ ಕೆಲಸವನ್ನು ಸ್ಥಳೀಯ ನಾಯಕರು ಮಾಡುತ್ತಾರೆಎಂದು ಹೇಳಿದ್ದಾರೆ.