ಬೆಂಗಳೂರು: 2019ರಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಹಲವರು ಸೋಲು ಕಂಡಿದ್ದಾರೆ. ಮತ್ತೆ ಕೆಲವರು ಜಯಗಳಿಸಿದ್ದಾರೆ.
2018ರಲ್ಲಿ ಕಾಂಗ್ರೆಸ್ ನಿಂದ ಜಯಗಳಿಸಿ ಆಪರೇಷನ್ ಕಮಲಕ್ಕೆ ಒಳಗಾಗಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಗಳಿಸಿದ್ದ ಕೆಲವರು ಈ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
ಅಥಣಿ ಕ್ಷೇತ್ರದಲ್ಲಿ ಮಹೇಶ ಕುಮಟಳ್ಳಿ ಪರಾಭವಗೊಂಡಿದ್ದಾರೆ. ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ್, ವಿಜಯನಗರ ಕ್ಷೇತ್ರದಲ್ಲಿ ಆನಂದ್ ಸಿಂಗ್ ಅವರ ಪುತ್ರ ಸಿದ್ದಾರ್ಥ ಸಿಂಗ್ ಸೋಲು ಕಂಡಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನಲ್ಲಿ ಕೆ. ಗೋಪಾಲಯ್ಯ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್, ಕೆಆರ್ ಪೇಟೆಯಲ್ಲಿ ಕೆ.ಸಿ. ನಾರಾಯಣಗೌಡ, ಮಸ್ಕಿಯಲ್ಲಿ ಪ್ರತಾಪಗೌಡ ಪಾಟೀಲ್, ರಾಣೆಬೆನ್ನೂರಿನಲ್ಲಿ ಆರ್. ಶಂಕರ್ ಸೋಲು ಕಂಡಿದ್ದಾರೆ.
ಹಿರೇಕೆರೂರು ಕ್ಷೇತ್ರದಲ್ಲಿ ಬಿ.ಸಿ. ಪಾಟೀಲ್, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್ ಸೋಲು ಕಂಡಿದ್ದಾರೆ.
ಕೆ.ಆರ್. ಪುರಂನಲ್ಲಿ ಬೈರತಿ ಬಸವರಾಜ್ ಜಯಗಳಿಸಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಗೆಲುವಿನ ನಗೆ ಬೀರಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಜಯಗಳಿಸಿದ್ದಾರೆ. ಯಶವಂತಪುರದಲ್ಲಿ ಎಸ್.ಟಿ. ಸೋಮಶೇಖರ್, ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಗೆಲುವು ಸಾಧಿಸಿದ್ದಾರೆ.