alex Certify BIG NEWS: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ: ಅಧಿವೇಶನದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲು ಸಿಎಂಗೆ ಜಮೀರ್ ನೇತೃತ್ವದ ನಿಯೋಗ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ: ಅಧಿವೇಶನದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲು ಸಿಎಂಗೆ ಜಮೀರ್ ನೇತೃತ್ವದ ನಿಯೋಗ ಮನವಿ

ಬೆಂಗಳೂರು: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದ ನಿಯೋಗ ಮನವಿ ಮಾಡಿದೆ. ಮುಂದಿನ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಖಮಡನಾ ನಿರ್ಣಯ ಕೈಗೊಳ್ಳುವಂತೆ ನಿಯೋಗ ಮನವಿ ಮಾಡಿದೆ.

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಉದ್ದೇಶಿಸಿದ್ದು, ರಾಜ್ಯ ವಕ್ಪ್ ಮಂಡಳಿ ಇದನ್ನು ತೀವ್ರವಾಗಿ ಖಂಡಿಸಿದೆ. ರಾಜ್ಯ ವಕ್ಪ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಕೇಂದ್ರದ ಪ್ರಸ್ತಾವನೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಾಂತರಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸಿರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಸೇರಿದಂತೆ ಹಲವು ನಾಯಕರು ಇದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...