![](https://kannadadunia.com/wp-content/uploads/2023/02/ashok-2jpg-887830-1600160520.jpg)
ಬೆಂಗಳೂರು : ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ ಭಗವಾನ್ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ರಾಜ್ಯ ಸರ್ಕಾರ ನಾಳೆ ರಜೆ ಘೋಷಣೆ ಮಾಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಸರ್ಕಾರ ರಜೆ ಘೋಷಣೆ ಮಾಡಿದೆ. ಹೀಗಾಗಿ ಕರ್ನಾಟಕದಲ್ಲೂ ರಜೆ ಘೋಷಿಸುವಂತೆ ಆಗ್ರಹಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯ ಸರ್ಕಾರಗಳೂ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸುವಂತೆ ಆರ್. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.