ನವದೆಹಲಿ : ಸಿಬಿಐ ಹಾಗೂ ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಿಸುವ ಮಸೂದೆಗಳಿಗೆ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರವು, ಕೇಂದ್ರೀಯ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ 5 ವರ್ಷಕ್ಕೆ ಹೆಚ್ಚಿಸುವ ಕುರಿತು ಮಸೂದೆ ಮಂಡಿಸಲು ಮುಂದಾಗಿತ್ತು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳು ಗದ್ದಲ ಸೃಷ್ಟಿ ಮಾಡಿವೆ.
ಈ ಹಿಂದೆಯೂ ಕೇಂದ್ರ ಸರ್ಕಾರ ಕೆಲವು ಬಿಲ್ ಗಳನ್ನು ಮಂಡಿಸಲು ಮುಂದಾದಾಗಲೂ ವಿರೋಧ ಪಕ್ಷಗಳಿಂದ ಗದ್ದಲ ಸೃಷ್ಟಿಯಾಗಿತ್ತು. ಆಗ ವಿರೋಧದ ಮಧ್ಯೆಯೂ ಕೇಂದ್ರ ಅವುಗಳನ್ನು ಪಾಸ್ ಮಾಡಿತ್ತು. ಕೇಂದ್ರ ಸರ್ಕಾರದ ಇಂತಹ ನಡೆಯ ಕುರಿತು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಬಿಜೆಪಿ ಸರ್ಕಾರವು ಸಾಂವಿಧಾನಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.