
ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಹಳೆಪಿಂಚಣಿ ಯೋಜನೆ ಜಾರಿ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸಮಿತಿಯ ವರದಿ ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಬಗ್ಗೆ ಭರವಸೆ ನೀಡಿದ್ದೆವು. ನಾವು ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೆ ಬದ್ಧರಾಗಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.